ADVERTISEMENT

ಮೋದಿ ಭೇಟಿಯಾದ ಸಿಂಗ್‌

​ಪ್ರಜಾವಾಣಿ ವಾರ್ತೆ
Published 27 ಮೇ 2015, 19:30 IST
Last Updated 27 ಮೇ 2015, 19:30 IST

ನವದೆಹಲಿ: ‘2 ಜಿ’ ಹಗರಣದಲ್ಲಿ ತಮ್ಮ ವಿರುದ್ಧ ಮಾಡಲಾಗಿರುವ ಆರೋಪಕ್ಕೆ ಎನ್‌ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲ ಗಂಟೆಗಳಲ್ಲಿಯೇ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು  ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ತೆರಳಿ ಭೇಟಿಯಾದರು.

ಮೋದಿ ಅವರ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ತೆರಳಿದ್ದ ಸಿಂಗ್‌, ಆರ್ಥಿಕ ಮತ್ತು ವಿದೇಶಾಂಗ ನೀತಿಗಳ ಬಗ್ಗೆ ಪ್ರಧಾನಿ ಜತೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಸಂಜೆ ಈ ಭೇಟಿ ನಿಗದಿಯಾಗಿತ್ತು. ಆದರೆ, ಕಾರಣಾಂತರಗಳಿಂದ ಅದನ್ನು ಬುಧವಾರ ಸಂಜೆಗೆ ಮುಂದೂಡಲಾಗಿತ್ತು. ‘ಮನಮೋಹನ್‌ ಭೇಟಿ ಖುಷಿ ತಂದಿದೆ. ಇದು ಮಹತ್ವದ ಭೇಟಿಯಾಗಿತ್ತು’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.