ಪಣಜಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಸಂದೇಶ ರವಾನಿಸಿದ್ದ ಎಂಜಿನಿಯರ್ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಲಾಗುವುದು ಎಂದು ಗೋವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಮೋಹನ್ ತಿಳಿಸಿದ್ದಾರೆ.
ಸಾಮಾಜಿಕ ಹೋರಾಟಗಾರರ ನಿಯೋಗದ ಜತೆ ಮಾತನಾಡಿದ ಮೋಹನ್ ಅವರು, ದೇವು ಚೋಡನಕರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೋದಿ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಹೇಳಿಕೆಯನ್ನು ದಾಖಲಿಸಿದ್ದು, ಆತನ ವಿರುದ್ಧ ಗೋವಾ ಮೂಲದ ಉದ್ಯಮಿ ಅತುಲ್ ಪೈ ಕಾನೆ ಸೈಬರ್್ ಅಪರಾಧ ಘಟಕದಲ್ಲಿ ಪ್ರಕರಣ ದಾಖಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.