ADVERTISEMENT

ಮ್ಯಾಗಿ: ವರದಿ ಬಂದ ನಂತರ ಕ್ರಮ- ಪಾಸ್ವಾನ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2015, 12:13 IST
Last Updated 4 ಜೂನ್ 2015, 12:13 IST

ಅಹಮದಾಬಾದ್(ಪಿಟಿಐ): ನೆಸ್ಲೆ ಕಂಪೆನಿಯ ಮ್ಯಾಗಿ ನೂಡಲ್ಸ್ ನಲ್ಲಿ ಹಾನಿಕಾರಕ ಅಂಶಗಳಿರುವ ಬಗ್ಗೆ ಅಧಿಕೃತ ವರದಿಗಳು ಬಂದ ನಂತರ ಕಂಪೆನಿ ಹಾಗೂ ಪ್ರಚಾರ ರಾಯಬಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಹೇಳಿದ್ದಾರೆ. 

ನೆಸ್ಲೆ ಕಂಪೆನಿಯ ಮ್ಯಾಗಿ ನೂಡಲ್ಸ್ ಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಈ ಕುರಿತು ಸತ್ಯ ಪರೀಕ್ಷೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪರೀಕ್ಷೆ ಪ್ರಧಿಕಾರಕ್ಕೆ (ಎಫ್ ಎಸ್ ಎಸ್ ಎಐ)ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದೊಂದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ(ಎನ್ ಸಿಡಿಆರ್ ಸಿ)ಕ್ಕೂ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.