ADVERTISEMENT

ಯಡಿಯೂರಪ್ಪ, ರೆಡ್ಡಿ ಪರ ಕಾಂಗ್ರೆಸ್‌ ಲಾಬಿ: ಭಾರದ್ವಾಜ್‌ ಆರೋಪ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2015, 9:00 IST
Last Updated 30 ಮಾರ್ಚ್ 2015, 9:00 IST

ನವದೆಹಲಿ: ಕರ್ನಾಟಕದಲ್ಲಿ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ಸಹೋದರರ ವಿರುದ್ಧ ಕ್ರಮ ಕೈಗೊಳ್ಳದಂತೆ ಕಾಂಗ್ರೆಸ್‌ ನಾಯಕರೇ ತಮ್ಮ ಮೇಲೆ ಒತ್ತಡ ಹೇರಿದ್ದರು ಎಂದು ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಗಂಭೀರ ಆರೋಪ ಮಾಡಿದ್ದಾರೆ. 

ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, ತಮ್ಮ ಅಧಿಕಾರ ಅವಧಿಯಲ್ಲಿ ನಡೆದ ಈ ರಾಜಕೀಯ ಗುಟ್ಟನ್ನು ರಟ್ಟು ಮಾಡಿದ್ದಾರೆ.

ಯಡಿಯೂರಪ್ಪ, ಜನಾರ್ದನ ರೆಡ್ಡಿ ಹಾಗೂ ಸಹೋದರರ ವಿರುದ್ಧ  ಕ್ರಮ ಕೈಗೊಳ್ಳಬೇಡಿ ಎಂದು ಕೆಲವು ಕಾಂಗ್ರೆಸ್‌ ನಾಯಕರು ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್‌ ಜತೆಗೂ ಕಾಂಗ್ರೆಸ್‌ ನಾಯಕರು ಉತ್ತಮ ಬಾಂಧವ್ಯ ಹೊಂದಿದ್ದರು ಎಂದು ಅವರು ಹೇಳಿದ್ದಾರೆ.

‘ಕಾಂಗ್ರೆಸ್‌ ನಾಯಕರು, ಕಳಂಕಿತ ಬಿಜೆಪಿ ಸಚಿವರ ಪರವಾಗಿ ಭಾರಿ ಲಾಬಿ ನಡೆಸಿದರೂ, ಒತ್ತಡಕ್ಕೆ ಮಣಿಯದೆ ಕಾರ್ಯನಿರ್ವಹಿಸಿದೆ. 2011ರಲ್ಲಿ ಯಡಿಯೂರಪ್ಪ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದೆ’ ಎಂದೂ ಭಾರದ್ವಾಜ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT