ADVERTISEMENT

ಯಾಕುಬ್‌ ಮೆಮನ್‌ ಗಲ್ಲು ಶಿಕ್ಷೆಗೆ ಸುಪ್ರೀಂ ತಡೆ

ಮುಂಬೈ ಸರಣಿ ಸ್ಫೋಟ

​ಪ್ರಜಾವಾಣಿ ವಾರ್ತೆ
Published 2 ಜೂನ್ 2014, 12:57 IST
Last Updated 2 ಜೂನ್ 2014, 12:57 IST

ನವದೆಹಲಿ (ಪಿಟಿಐ): 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟದ ಅಪರಾಧಿ ಯಾಕುಬ್‌ ಮೆಮನ್‌ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ.

ಯಾಕುಬ್‌ ಮೆಮನ್‌ಗೆ ವಿಶೇಷ ಟಾಡಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. 2013ರಲ್ಲಿ ಇದನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿತ್ತು.

ಯಾಕುಬ್‌ ಮೆಮನ್‌ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದರು. ಮಹಾರಾಷ್ಟ್ರ ಸರ್ಕಾರ ನೀಡಿದ ವರದಿಯ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟದಲ್ಲಿ 250 ಜನರು ಸಾವನ್ನಪ್ಪಿದ್ದರು. ಸುಮಾರು 700 ಜನ ಗಾಯಗೊಂಡಿದ್ದರು. ಯಾಕುಬ್‌ ಮೆಮನ್‌ ಭೂಗತ ಪಾತಕಿ ಟೈಗರ್‌ ಮೆಮನ್‌ ಸಹೋದರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT