ADVERTISEMENT

ಯುಪಿಎಸ್‌ಸಿ: 16 ಸಾವಿರ ಅಭ್ಯರ್ಥಿ ಉತ್ತೀರ್ಣ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2014, 19:30 IST
Last Updated 14 ಅಕ್ಟೋಬರ್ 2014, 19:30 IST

ನವದೆಹಲಿ (ಪಿಟಿಐ): ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಡೆಸಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ 16 ಸಾವಿರ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಪರೀಕ್ಷೆ ನಡೆಸಿದ 50 ದಿನಗಳಲ್ಲಿ ಫಲಿತಾಂಶ ಪ್ರಕಟಿಸಿ ಯುಪಿಎಸ್‌ಸಿ ದಾಖಲೆ ನಿರ್ಮಿಸಿದೆ.

ಕಳೆದ ಆಗಸ್‌್ಟ 24ರಂದು ನಡೆದ ಪೂರ್ವಭಾವಿ ಪರೀಕ್ಷೆಗೆ 4,52,334 ಅಭ್ಯರ್ಥಿಗಳು ಹಾಜರಾಗಿದ್ದರು. ಅವರಲ್ಲಿ 16, 933 ಅಭ್ಯರ್ಥಿಗಳು ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಆಯೋಗದ ಕಾರ್ಯದರ್ಶಿ ಅಶಿಮ್ ಖುರಾನಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.