ADVERTISEMENT

ಯೋಧ ತೇಜ್ ಬಹದ್ದೂರ್ ಯಾದವ್‌ ಬಿಎಸ್‌ಎಫ್ ಸೇವೆಯಿಂದ ವಜಾ

ಸೇನೆಯಲ್ಲಿ ಕಳಪೆ ಆಹಾರದ ಬಗ್ಗೆ ದೇಶದ ಗಮನ ಸೆಳೆದಿದ್ದ ಯೋಧ

ಏಜೆನ್ಸೀಸ್
Published 19 ಏಪ್ರಿಲ್ 2017, 11:03 IST
Last Updated 19 ಏಪ್ರಿಲ್ 2017, 11:03 IST
ಯೋಧ ತೇಜ್ ಬಹದ್ದೂರ್ ಯಾದವ್‌ ಬಿಎಸ್‌ಎಫ್ ಸೇವೆಯಿಂದ ವಜಾ
ಯೋಧ ತೇಜ್ ಬಹದ್ದೂರ್ ಯಾದವ್‌ ಬಿಎಸ್‌ಎಫ್ ಸೇವೆಯಿಂದ ವಜಾ   
ನವದೆಹಲಿ: ಬಿಎಸ್‌ಎಫ್ ಯೋಧರಿಗೆ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
 
ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ‘ಅಶಿಸ್ತಿನ’ ಕಾರಣ ನೀಡಿ ಸೇವೆಯಿಂದ ವಜಾಗೊಳಿಸಲಾಗಿದೆ. ಬಿಎಸ್‌ಎಫ್ ಕಾಯ್ದೆ ಮತ್ತು ನಿಯಮಗಳ ಅನ್ವಯ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಸ್‌ಎಫ್ ಮೂಲಗಳು ತಿಳಿಸಿವೆ.
 
ಬಿಎಸ್‌ಎಫ್ ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ತೇಜ್ ಬಹದ್ದೂರ್ ಯಾದವ್ ಅವರು ಫೇಸ್‌ಬುಕ್‌ನಲ್ಲಿ ಹಾಕಿದ್ದ ವಿಡಿಯೊ ವೈರಲ್ ಆಗಿತ್ತು. ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಕೇಂದ್ರ ಗೃಹ ಸಚಿವಾಲಯ ಹಾಗೂ ಬಿಎಸ್‌ಎಫ್ ಕಡೆನಿಂದ ವರದಿ ಕೇಳಿತ್ತು.
 
ವಿಡಿಯೊ ವೈರಲ್ ಆಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಯೋಧರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಕ  ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. 
 
ಇದನ್ನೂ ಓದಿ...
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.