ADVERTISEMENT

ರಾಜಕೀಯದ ಮೇಲೆ ಪರಿಣಾಮ?

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ತೀರ್ಪು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2014, 19:30 IST
Last Updated 25 ಸೆಪ್ಟೆಂಬರ್ 2014, 19:30 IST

ಚೆನ್ನೈ (ಐಎಎನ್‌ಎಸ್‌): ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ 18 ವರ್ಷಗಳ ಹಿಂದಿನ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಶನಿವಾರ ಬೆಂಗಳೂರಿನ ನ್ಯಾಯಾಲಯದಲ್ಲಿ ಹೊರಬೀಳಲಿದ್ದು, ಈ ತೀರ್ಪು ತಮಿಳುನಾಡು ರಾಜಕೀಯ ವಲಯ­ದಲ್ಲಿ ಸಂಚಲನ ಮೂಡಿಸುವ ನಿರೀಕ್ಷೆ ಇದೆ.

ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಅವರು ಜಯಲಲಿತಾ ಮತ್ತು ಇತರ ಮೂವರ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಶನಿವಾರ ನೀಡುವ ಸಾಧ್ಯತೆಗಳು ಇವೆ. ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಶಿಕ್ಷೆ ವಿಧಿಸಿದರೆ ತಮಿಳುನಾಡಿನ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಹಾಗೂ 2016ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ಹಿನ್ನಡೆ ಉಂಟಾಗಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ತೀರ್ಪು ಜಯಲಲಿತಾ ಪರ ಬಂದರೆ ಡಿಎಂಕೆ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿತ್ತು ಎನ್ನುವ ಮೂಲಕ ಎಡಿಎಐಡಿಎಂಕೆ ತನ್ನ ವಿರೋಧಿಗಳ ವಿರುದ್ಧ ಜನಾಭ್ರಿಪಾಯ ಮೂಡಿಸುವ ಸಾಧ್ಯತೆಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.