ನವದೆಹಲಿ (ಪಿಟಿಐ): ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ.
ರಾಜಸ್ಥಾನದಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಈ ಉಪಚುನಾವಣೆ ಫಲಿತಾಂಶದಿಂದ ಭಾರೀ ಮುಖಭಂಗವಾಗಿದೆ. ನಾಲ್ಕು ಸ್ಥಾನಗಳ ಪೈಕಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮೂರು ಸ್ಥಾನಗಳನ್ನು ಪಡೆದರೆ ಬಿಜೆಪಿ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಜಯ ಗಳಿಸಿದೆ.
ಉತ್ತರ ಪ್ರದೇಶದಲ್ಲೂ ಬಿಜೆಪಿಯ ಸ್ಥಿತಿ ಚಿಂತಾಜನಕವಾಗಿದೆ. 11 ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ 8 ಸ್ಥಾನಗಳನ್ನು ಗೆದ್ದರೆ ಬಿಜೆಪಿ ಕೇವಲ ಮೂರು ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿದೆ. ಬಿಜೆಪಿ 7 ಸ್ಥಾನಗಳನ್ನು ಕಳೆದು ಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.