ADVERTISEMENT

ರಾಜೀವ್‌ ಹಂತಕರಿಗಿಲ್ಲ ಬಿಡುಗಡೆಯ ಭಾಗ್ಯ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2014, 9:04 IST
Last Updated 25 ಏಪ್ರಿಲ್ 2014, 9:04 IST

ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್‌ಗಾಂಧಿ  ಹಂತಕರ ಬಿಡುಗಡೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದೆ.

ಇದರಿಂದ 7 ಜನ ರಾಜೀವ್‌ ಹಂತಕರಿಗೆ  ಬಿಡುಗಡೆಯ ಭಾಗ್ಯ ದೊರೆಯದಂತಾಗಿದ್ದು ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಶ್ನೆಗಳನ್ನು ಎತ್ತಿರುವ ವಿಚಾರಣಾ ನ್ಯಾಯಾಮೂರ್ತಿಗಳಾದ ಪಿ. ಸದಾಶಿಮಂ ಅವರು ಪ್ರಕರಣವನ್ನು ಐವರು ನ್ಯಾಯಾಧೀಶರಿರುವ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದರು.

ತಮಿಳುನಾಡು ಸರ್ಕಾರ ರಾಜೀವ್‌ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT