ADVERTISEMENT

ರಾಜ್ಯ ವಿಧಾನಸಭಾ ಚುನಾವಣೆ: ‘ತ್ರಿಶಂಕು ಸಾಧ್ಯತೆ’

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 19:30 IST
Last Updated 7 ಡಿಸೆಂಬರ್ 2017, 19:30 IST
ರಾಜ್ಯ ವಿಧಾನಸಭಾ ಚುನಾವಣೆ: ‘ತ್ರಿಶಂಕು ಸಾಧ್ಯತೆ’
ರಾಜ್ಯ ವಿಧಾನಸಭಾ ಚುನಾವಣೆ: ‘ತ್ರಿಶಂಕು ಸಾಧ್ಯತೆ’   

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ ಎಂದು ಖಾಸಗಿ ಚಾನೆಲ್‌ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ತಿಳಿಸಿದೆ.

ಸಮೀಕ್ಷೆಯ ಪೂರ್ಣ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು, ಕಾಂಗ್ರೆಸ್‌ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದೆ.

ಕಾಂಗ್ರೆಸ್‌ 88 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ತೀವ್ರ ಪೈಪೋಟಿ ನೀಡುವ ಬಿಜೆಪಿ 82 ಮತ್ತು  ಜೆಡಿಎಸ್‌ 43 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಈ ಮೂಲಕ ಜೆಡಿಎಸ್‌ ಕಿಂಗ್‌ ಮೇಕರ್‌ ಆಗಲಿದೆ. ಪಕ್ಷೇತರರು 11 ಸ್ಥಾನಗಳನ್ನು ಗೆಲ್ಲುವ ಸಂಭವವಿದೆ. 2004ರ ಫಲಿತಾಂಶವೇ ಮರುಕಳಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಅಭಿಪ್ರಾಯಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.