ADVERTISEMENT

ರಾಮ ಮಂದಿರ ನಿರ್ಮಾಣಕ್ಕೆ ಸಕಾಲ: ಚಂದ್ರಶೇಖರ್‌

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 19:10 IST
Last Updated 24 ಮಾರ್ಚ್ 2017, 19:10 IST

ಹೈದರಾಬಾದ್: ರಾಮ ಜನ್ಮಭೂಮಿ– ಬಾಬರಿ ಮಸೀದಿ ವಿವಾದವನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿರುವುದನ್ನು ಸ್ವಾಗತಿಸಿರುವ ತೆಲಂಗಾಣ ಆರ್ಎಸ್ಎಸ್ ಮುಖಂಡ ಇ.ಚಂದ್ರಶೇಖರ್, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಈಗ ಕಾಲ ಪಕ್ವವಾಗಿದೆ ಎಂದಿದ್ದಾರೆ.

ವಿವಾದವನ್ನು ಬಗೆ ಹರಿಸಿಕೊಂಡು ಮಂದಿರವನ್ನು ನಿರ್ಮಿಸಿದರೆ ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ಕೊಡುಗೆ ಆಗುತ್ತದೆ ಎಂದು ಹೇಳಿದ್ದಾರೆ.
ರಾಮ ಜನ್ಮಭೂಮಿ– ಬಾಬರಿ ಮಸೀದಿ ವಿವಾದವನ್ನು  ನ್ಯಾಯಾಲಯದ ಹೊರಗೆ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್ ಸಲಹೆಯು ಸ್ವಾಗತಾರ್ಹ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

ಮಂದಿರ ನಿರ್ಮಾಣದ ಬಗ್ಗೆ  ಮುಸ್ಲಿಂ ಸಮುದಾಯಕ್ಕೆ ಮೊದಲಿದ್ದ ಭಾವನೆ ಈಗ ಬದಲಾಗಿದೆ. ಆದ್ದರಿಂದ ಸಂವಿಧಾನದ ಚೌಕಟ್ಟಿನಲ್ಲಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿ ಸಿಕೊಂಡು ತ್ವರಿತವಾಗಿ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.