ADVERTISEMENT

ರಾಷ್ಟ್ರಪತಿ ಚುನಾವಣೆ: ಇಂದು ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 19:30 IST
Last Updated 19 ಜುಲೈ 2017, 19:30 IST
ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ (ಸಂಗ್ರಹ ಚಿತ್ರ)
ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ (ಸಂಗ್ರಹ ಚಿತ್ರ)   

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಗುರುವಾರ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ ಮತ್ತು ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಮೀರಾ ಕುಮಾರ್‌ ನಡುವಣ ಸ್ಪರ್ಧೆಯ ಫಲಿತಾಂಶ ಸಂಜೆಯ ಹೊತ್ತಿಗೆ ಪ್ರಕಟವಾಗುವ ನಿರೀಕ್ಷೆ ಇದೆ.

ಬೆಳಗ್ಗೆ 11 ಗಂಟೆಗೆ ಎಣಿಕೆ ಆರಂಭವಾಗಲಿದೆ. ಎಲ್ಲ ರಾಜ್ಯಗಳಿಂದ ಮತಪೆಟ್ಟಿಗೆಗಳು ಮಂಗಳವಾರವೇ ಸಂಸತ್‌ ಭವನಕ್ಕೆ ತಲುಪಿವೆ. ಲೆಕ್ಕಾಚಾರ ಪ್ರಕಾರ ಕೋವಿಂದ್‌ ಅವರ ಗೆಲುವು ಬಹುತೇಕ ಖಚಿತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT