ADVERTISEMENT

ರಾಷ್ಟ್ರಪತಿ ಚುನಾವಣೆ: ಶರದ್‌ ಯಾದವ್‌ ಅಭ್ಯರ್ಥಿ?

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2017, 19:18 IST
Last Updated 21 ಏಪ್ರಿಲ್ 2017, 19:18 IST
ರಾಷ್ಟ್ರಪತಿ ಚುನಾವಣೆ: ಶರದ್‌ ಯಾದವ್‌ ಅಭ್ಯರ್ಥಿ?
ರಾಷ್ಟ್ರಪತಿ ಚುನಾವಣೆ: ಶರದ್‌ ಯಾದವ್‌ ಅಭ್ಯರ್ಥಿ?   

ನವದೆಹಲಿ: ಈ ವರ್ಷ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಸರ್ವಸಮ್ಮತ ಅಭ್ಯರ್ಥಿಯಾಗಿ ಜೆಡಿಯು ಅಧ್ಯಕ್ಷ ಶರದ್‌ ಯಾದವ್‌ ಅವರು ಹೊರಹೊಮ್ಮುವ ಸಾಧ್ಯತೆ ಇದೆ.

ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖಂಡ ನಿತೀಶ್‌ ಕುಮಾರ್‌ ಅವರು ಗುರುವಾರ ದೆಹಲಿಗೆ ಹೋಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಂತರ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರು ಸೋನಿಯಾ ಅವರನ್ನು ಭೇಟಿಯಾಗಿದ್ದಾರೆ.

ಈ ಇಬ್ಬರೂ ರಾಷ್ಟ್ರಪತಿ ಚುನಾವಣೆ ಬಗ್ಗೆ ಕಾಂಗ್ರೆಸ್‌ ಮುಖ್ಯಸ್ಥೆಯ ಜತೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ADVERTISEMENT

ವಿರೋಧ ಪಕ್ಷಗಳು ಒಟ್ಟಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರನ್ನು ಕಣಕ್ಕೆ ಇಳಿಸಬೇಕು ಎಂದು ಈ ಇಬ್ಬರೂ ಮುಖಂಡರು ಪ್ರತಿಪಾದಿಸುತ್ತಿದ್ದಾರೆ.

ಆಡಳಿತಾರೂಢ ಎನ್‌ಡಿಎ ಕಣಕ್ಕೆ ಇಳಿಸುವ ಅಭ್ಯರ್ಥಿಯ ವಿರುದ್ಧ ಶರದ್‌ ಯಾದವ್‌ ಅವರೇ ಸ್ಪರ್ಧಿಸಲಿದ್ದಾರೆ ಎಂಬ ಮಾತು ರಾಜಧಾನಿಯ ರಾಜಕೀಯ ವಲಯದಲ್ಲಿ ವ್ಯಾಪಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.