ADVERTISEMENT

ರಾಷ್ಟ್ರಪತಿ ಭೇಟಿ ಮಾಡಿದ ಸೋನಿಯಾ

​ಪ್ರಜಾವಾಣಿ ವಾರ್ತೆ
Published 8 ಜುಲೈ 2014, 19:30 IST
Last Updated 8 ಜುಲೈ 2014, 19:30 IST

ನವದೆಹಲಿ (ಪಿಟಿಐ): ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟಿರುವ ಬೆನ್ನಲ್ಲೇ ಸೋನಿಯಾ ಗಾಂಧಿ ಅವರು ರಾಷ್ಟ್ರಪತಿ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ ಸಂಸದರೊಂದಿಗೆ ಬೆಳಿಗ್ಗೆ ಸಮಾಲೋಚನೆ ನಡೆಸಿದ ನಂತರ ಸೋನಿಯಾ ಅವರು ರಾಷ್ಟ್ರಪತಿ ಅವರನ್ನು ಭೇಟಿಯಾಗಿದ್ದರು. ಇದೊಂದು ಸೌಜನ್ಯದ ಭೇಟಿ­ಯಾ­ಗಿದ್ದು, ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ತಕ್ಷಣವೇ ವಿರೋಧ ಪಕ್ಷದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೋಕಸಭೆಯ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರಿಗೆ ಪತ್ರ ಬರೆಯಲು ಸಂಸದರ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.