ADVERTISEMENT

ರಾಷ್ಟ್ರೀಯ ಹಸಿರು ಪೀಠ ಸೂಚನೆ

ಹವಾಮಾನ ಬದಲಾವಣೆ ತಡೆಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2014, 19:30 IST
Last Updated 1 ಡಿಸೆಂಬರ್ 2014, 19:30 IST

ನವದೆಹಲಿ(ಪಿಟಿಐ): ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಹವಾಮಾನ ಬದಲಾವಣೆಯ ರಾಷ್ಟ್ರೀಯ ಕ್ರಿಯಾ ಯೋಜನೆ (ಎನ್‌ಎಪಿಸಿಸಿ) ಅಳವಡಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ರಾಷ್ಟ್ರೀಯ ಹಸಿರು ಪೀಠ (ಎನ್‌ಜಿಟಿ) ಸೂಚನೆ ನೀಡಿದೆ.

ಪರಿಸರ ಮತ್ತು ಅರಣ್ಯ ಸಚಿವಾಲಯ, ಇಂಧನ ಸಚಿವಾಲಯ ಮತ್ತು ಹಲವಾರು ರಾಜ್ಯಗಳಿಗೆ ಎನ್‌ಜಿಟಿ ಮುಖ್ಯಸ್ಥ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ಅವರ ನೇತೃತ್ವದ ಪೀಠ ನೋಟಿಸ್‌ ಜಾರಿ ಮಾಡಿದೆ. ಹವಾಮಾನ ಬದಲಾವಣೆ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ವಕೀಲ ಗೌರವ್‌ ಕುಮಾರ್ ಬನ್ಸಾಲ್ ಎಂಬುವರು ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.