ADVERTISEMENT

ರೈತರ, ಬುಡಕಟ್ಟು ಜನರ ಬೇಡಿಕೆಗಳಿಗೆ ಸ್ಪಂದಿಸಿ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಫಡಣವೀಸ್‌ಗೆ ರಾಹುಲ್ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 10:57 IST
Last Updated 12 ಮಾರ್ಚ್ 2018, 10:57 IST
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)   

ನವದೆಹಲಿ: ಮುಂಬೈನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಬುಡಕಟ್ಟು ಜನರ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ‘ಅಹಂ’ ಬದಿಗಿಟ್ಟು ಸ್ಪಂದಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.

‘ಮುಂಬೈಗೆ ರೈತರು ಹಮ್ಮಿಕೊಂಡಿರುವ ಮಹಾ ಜಾಥ ಜನರ ಶಕ್ತಿ ಏನೆಂಬುದಕ್ಕೆ ಉದಾಹರಣೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನಾದರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಬುಟಕಟ್ಟು ಜನರ ಪರ ಕಾಂಗ್ರೆಸ್ ಇರಲಿದೆ. ಅಹಂ ಬಿಟ್ಟು ಬೇಡಿಕೆಗಳಿಗೆ ಸ್ಪಂದಿಸುವಂತೆ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇನೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT