ADVERTISEMENT

ರೋಹಿಣಿ ದೆಹಲಿ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2014, 10:34 IST
Last Updated 21 ಏಪ್ರಿಲ್ 2014, 10:34 IST

ನವದೆಹಲಿ (ಪಿಟಿಐ): ದೆಹಲಿ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೊರ್ಲ(ಜಿ) ರೋಹಿಣಿ ಅವರು ಸೋಮವಾರ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು.

ದೆಹಲಿ ರಾಜ್ಯಪಾಲರಾದ ನಜೀಬ್‌ ಜಂಗ್‌ ಅವರು ಗೌಪತ್ಯೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿ ಹೈಕೋರ್ಟ್‌ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಮುಖ್ಯ ನ್ಯಾಯಮೂರ್ತಿ ನೇಮಕಗೊಂಡಿದ್ದಾರೆ.

ರೋಹಿಣಿ ಅವರು ಮೂಲತಹ ಆಂಧ್ರಪ್ರದೇಶದ ವಿಶಾಖಪಟ್ಟಣದವರು. ಸುಪ್ರೀಂ ಕೋರ್ಟ್‌ ಸೇರಿದಂತೆ ಹಲವು ಹೈಕೋರ್ಟ್‌ಗಳಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT