ADVERTISEMENT

ಲಂಡನ್‌ನಲ್ಲಿ ವ್ಯಾಸಂಗಕ್ಕೆ ದಕ್ಷಿಣ ಭಾರತದ ವಿದ್ಯಾರ್ಥಿಗಳ ಒಲವು

ಪಿಟಿಐ
Published 19 ಸೆಪ್ಟೆಂಬರ್ 2017, 19:30 IST
Last Updated 19 ಸೆಪ್ಟೆಂಬರ್ 2017, 19:30 IST

ಚೆನ್ನೈ: ಲಂಡನ್ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅರ್ಜಿ ಸಲ್ಲಿಸುವವರಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ 9ರಷ್ಟು ಹೆಚ್ಚಳ ಆಗಿದೆ ಎಂದು ಚೆನ್ನೈನಲ್ಲಿರುವ ಬ್ರಿಟನ್ ರಾಯಭಾರ ಕಚೇರಿಯ ಉಪ ರಾಯಭಾರಿ ಭರತ್ ಜೋಷಿ ತಿಳಿಸಿದ್ದಾರೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ವಿದ್ಯಾರ್ಥಿಗಳಿಂದ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ವಿಶ್ವವಿದ್ಯಾಲಯಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಲ್ಲಿ ಸುಧಾರಣೆಯಾಗಿದೆ. ಭಾರತೀಯರಿಗೆ ನೀಡಲಾಗುತ್ತಿರುವ ಪ್ರವಾಸಿ ವೀಸಾಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎನ್ನುವ ಮಾಹಿತಿಯನ್ನು ಅವರು ನೀಡಿದ್ದಾರೆ.

ಪ್ರವಾಸಿ ವೀಸಾ ಕೋರಿ ಶೇ 80ರಷ್ಟು ಹಾಗೂ ಉದ್ಯೋಗ ವೀಸಾ ಕೋರಿ ಶೇ 20ರಷ್ಟು ಅರ್ಜಿಗಳು ಸಲ್ಲಿಕೆಯಾಗುತ್ತವೆ. 2017ರ ಮಾರ್ಚ್‌ ಕೊನೆಯಲ್ಲಿ ಬಿಡುಗಡೆಯಾಗಿರುವ ಮಾಹಿತಿ ಪ್ರಕಾರ 11,700 ವಿದ್ಯಾರ್ಥಿ ವೀಸಾ ಹಾಗೂ 5,000 ಅಲ್ಪಾವಧಿ ಅಧ್ಯಯನ ವೀಸಾ ನೀಡಲಾಗಿದೆ. ಇದೇ ಅವಧಿಯಲ್ಲಿ 60,000 ಉದ್ಯೋಗ ವೀಸಾಗಳನ್ನು ಜಾರಿ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.