ADVERTISEMENT

ಲಖನೌ ಶಾಲೆಗೆ ಬೆಂಕಿ: ಸ್ವಲ್ಪದರಲ್ಲೇ ತಪ್ಪಿದ ದುರಂತ

ಐಎಎನ್ಎಸ್
Published 19 ಸೆಪ್ಟೆಂಬರ್ 2017, 9:01 IST
Last Updated 19 ಸೆಪ್ಟೆಂಬರ್ 2017, 9:01 IST
ಲಖನೌ ಶಾಲೆಗೆ ಬೆಂಕಿ: ಸ್ವಲ್ಪದರಲ್ಲೇ ತಪ್ಪಿದ ದುರಂತ
ಲಖನೌ ಶಾಲೆಗೆ ಬೆಂಕಿ: ಸ್ವಲ್ಪದರಲ್ಲೇ ತಪ್ಪಿದ ದುರಂತ   

ಲಖನೌ: ಇಲ್ಲಿನ ಶಾಲೆಯೊಂದರಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಅನಾಹುತ ಸಂಭವಿಸಿರುವ ವರದಿಯಾಗಿಲ್ಲ.

ನಗರದ ರಾಜಾಜೀಪುರಂ ನಲ್ಲಿರುವ ಎಸ್‌ಕೆಡಿ ಅಕಾಡೆಮಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.

‘ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಮತ್ತು ಮಕ್ಕಳನ್ನು ಶಾಲೆಯಿಂದ ಹೊರಕಳುಹಿಸಿ ಯಾವುದೇ ಅಪಾಯ ಸಂಭವಿಸದಂತೆ ನೋಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ. ಬೆಂಕಿ ಹೇಗೆ ಕಾಣಿಸಿಕೊಂಡಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.