ADVERTISEMENT

ಲೆ.ಜ. ರಾವತ್‌ ಸೇನಾ ಪಡೆ, ಧನೋವಾ ವಾಯುಪಡೆ ಮುಖ್ಯಸ್ಥ

ಪಿಟಿಐ
Published 17 ಡಿಸೆಂಬರ್ 2016, 19:30 IST
Last Updated 17 ಡಿಸೆಂಬರ್ 2016, 19:30 IST
ರಾವತ್‌
ರಾವತ್‌   
ನವದೆಹಲಿ: ಲೆಫ್ಟಿನೆಂಟ್ ಜನರಲ್‌ ಬಿಪಿನ್‌ ರಾವತ್‌ ಅವರನ್ನು ಸೇನಾ ಪಡೆಯ ನೂತನ ಮುಖ್ಯಸ್ಥರನ್ನಾಗಿ ಮತ್ತು ಏರ್‌ ಚೀಫ್‌ ಮಾರ್ಷಲ್‌ ಬಿ.ಎಸ್‌. ಧನೋವಾ ಅವರನ್ನು ವಾಯು ಪಡೆಯ (ಐಎಎಫ್‌) ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ಶನಿವಾರ ನೇಮಕ ಮಾಡಿದೆ.
 
ಸೇನಾ ಪಡೆಯ ಉಪ ಮುಖ್ಯಸ್ಥರಾಗಿರುವ ರಾವತ್‌ ಅವರು, ಇಬ್ಬರು ಹಿರಿಯ ಅಧಿಕಾರಿಗಳನ್ನು  (ಅತ್ಯಂತ ಹಿರಿಯ ಸೇನಾ ಕಮಾಂಡರ್‌, ಪೂರ್ವ ಕಮಾಂಡ್‌ನ ಮುಖ್ಯಸ್ಥ ಪ್ರವೀಣ್‌ ಬಕ್ಷಿ ಮತ್ತು ದಕ್ಷಿಣ ಕಮಾಂಡ್‌ನ ಮುಖ್ಯಸ್ಥ ಪಿ.ಎಂ. ಹರಿಜ್‌) ಹಿಂದಿಕ್ಕಿ ಭೂ ಸೇನೆಯ ಮುಖ್ಯಸ್ಥರ ಹುದ್ದೆಗೆ ನೇಮಕವಾಗಿದ್ದಾರೆ. 
 
ಸೇನಾ ಪಡೆ ಮುಖ್ಯಸ್ಥ ಜನರಲ್‌ ದಲ್ಬೀರ್‌ ಸಿಂಗ್‌ ಸುಹಾಗ್‌ ಅಧಿಕಾರಾವಧಿ ಡಿಸೆಂಬರ್‌ 31ಕ್ಕೆ ಕೊನೆಗೊಳ್ಳಲಿದ್ದು, ರಾವತ್‌ ಅವರು ಸುಹಾಗ್‌ ಸ್ಥಾನವನ್ನು ತುಂಬಲಿದ್ದಾರೆ.
 
ವಾಯುಪಡೆಯ ಮುಖ್ಯಸ್ಥರಾದ ಅರೂಪ್‌ ರಾಹಾ ಅವರು ಡಿ.  31ರಂದು ನಿವೃತ್ತರಾಗಲಿದ್ದು, ಧನೋವಾ ಅವರು ಅದೇ ದಿನ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.