ADVERTISEMENT

ವಾಗ್ದಂಡನೆ ನೋಟಿಸ್‌ ತಿರಸ್ಕರಿಸಿದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮನವಿ: ಕಾಂಗ್ರೆಸ್

ಏಜೆನ್ಸೀಸ್
Published 24 ಏಪ್ರಿಲ್ 2018, 1:35 IST
Last Updated 24 ಏಪ್ರಿಲ್ 2018, 1:35 IST
ದೀಪಕ್‌ ಮಿಶ್ರಾ (ಸಂಗ್ರಹ ಚಿತ್ರ)
ದೀಪಕ್‌ ಮಿಶ್ರಾ (ಸಂಗ್ರಹ ಚಿತ್ರ)   

ನವದೆಹಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಪದಚ್ಯುತಿಗೆ ಸಲ್ಲಿಸಿದ್ದ ವಾಗ್ದಂಡನೆ ನಿಲುವಳಿ ನೋಟಿಸ್‌ ಅನ್ನು ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯ ನಾಯ್ಡು ತಿರಸ್ಕರಿಸಿರುವುದನ್ನು ಪಕ್ಷದ ಸಂಸದರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಆದರೆ, ಈ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಪೀಠವನ್ನು ಮುಖ್ಯ ನ್ಯಾಯಮೂರ್ತಿಗಳು ನಿರ್ಧರಿಸಬಾರದು ಎಂದೂ ಅದು ಹೇಳಿದೆ.

ವಾಗ್ದಂಡನೆ ನಿಲುವಳಿ ನೋಟಿಸ್‌ ಅನ್ನು ತಿರಸ್ಕರಿಸಿದ್ದು ಅಸಾಂವಿಧಾನಿಕ ಹಾಗೂ ಕಾನೂನುಬಾಹಿರ ಕ್ರಮ ಎಂದು ಕಾಂಗ್ರೆಸ್ ಸೋಮವಾರ ಪ್ರತಿಕ್ರಿಯಿಸಿತ್ತು.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತದ ವ್ಯಕ್ತಿಗಳನ್ನು ಪ್ರಮುಖ ಸಾಂವಿಧಾನಿಕ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಪ್ರಮುಖ ಸಾಂವಿಧಾನಿಕ ಸಂಸ್ಥೆಗಳ ಪಾವಿತ್ರ್ಯ ನಾಶ ಮಾಡಲು ಹೊರಟಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದರು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.