ADVERTISEMENT

ವಾಜಪೇಯಿ, ಮಾಳವೀಯಗೆ ಭಾರತರತ್ನ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2014, 11:53 IST
Last Updated 24 ಡಿಸೆಂಬರ್ 2014, 11:53 IST

ನವದೆಹಲಿ (ಪಿಟಿಐ): ‘ಅಜಾತ ಶತ್ರು’ ಖ್ಯಾತಿಯ ರಾಜಕಾರಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಶಿಕ್ಷಣ ತಜ್ಞರೂ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಮದನ್ ಮೋಹನ್ ಮಾಳವೀಯ (ಮರಣೋತ್ತರ) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಸೇವಾ ಪುರಸ್ಕರ ಭಾರತರತ್ನ ನೀಡಲು ಸರ್ಕಾರ ನಿರ್ಧರಿಸಲಾಗಿದೆ.

ವಾಜಪೇಯಿ ಅವರ 90ನೇ ಜನ್ಮದಿನ ಹಾಗೂ ಮಾಳವೀಯ ಅವರ153ನೇ ಜಯಂತಿಗೆ ಇನ್ನೊಂದು ದಿನ ಬಾಕಿ ಉಳಿದಿರುವಂತೆಯೇ ಪುರಸ್ಕಾರವನ್ನು ಘೋಷಿಸಲಾಗಿದೆ.

‘ಪಂಡಿತ್ ಮದನ್ ಮೋಹನ್ ಮಾಳವೀಯ ಹಾಗೂ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸಲು ರಾಷ್ಟ್ರಪತಿ ಅವರು ನಿರ್ಧರಿಸಿದ್ದಾರೆ’ ಎಂದು ರಾಷ್ಟ್ರಪತಿ ಭವನದ ವಕ್ತಾರರೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.