ADVERTISEMENT

ವಿಕಿರಣ ಸೋರಿಕೆ: ಟರ್ಕಿ ವಿಮಾನ ತುರ್ತು ಭೂಸ್ಪರ್ಶ

​ಪ್ರಜಾವಾಣಿ ವಾರ್ತೆ
Published 29 ಮೇ 2015, 7:55 IST
Last Updated 29 ಮೇ 2015, 7:55 IST

ನವದೆಹಲಿ (ಪಿಟಿಐ): ಟರ್ಕಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನದಲ್ಲಿ ರೇಡಿಯೋಆ್ಯಕ್ಟಿವ್‌ ವಿಕಿರಣ ಸೋರಿಕೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ.

ವಿಮಾನದ ಮೆಡಿಕಲ್‌ ಕಿಟ್‌ನಲ್ಲಿ ವಿಕಿರಣ ಸೋರಿಕೆಯಾಗಿದೆ. ಇದನ್ನು ಕ್ಯಾನ್ಸರ್‌ ಚಿಕಿತ್ಸೆಗೆ ಬಳಸಲಾಗುತ್ತದೆ ಎನ್ನಲಾಗಿದೆ. ಈ ವಿಕಿರಣ ಸೋರಿಕೆಯಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ತಿಳದ ಕೂಡಲೇ ವಿಪತ್ತು ನಿರ್ವಹಣ ಪಡೆ (ಎನ್‌ಡಿಆರ್‌ಎಫ್‌)ಮತ್ತು ವೈದ್ಯಕೀಯ ತಂಡಗಳು ನಿಲ್ದಾಣಕ್ಕೆ ಆಗಮಿಸಿ ತಪಾಸಣೆ ನಡೆಸಿವೆ. ಈ ವಿಕಿರಣ ಸೋರಿಕೆಯಿಂದ ಆರೋಗ್ಯದ ಮೇಲೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಎನ್‌ಡಿಆರ್‌ಎಫ್‌ನ ನಿರ್ದೇಶಕ ಓ.ಪಿ. ಸಿಂಗ್‌ ತಿಳಿಸಿದ್ದಾರೆ.

ವಿಕಿರಣ ಸೋರಿಕೆಯಿಂದ ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT