ADVERTISEMENT

ವಿಚಾರಣೆಗೆ ಕಾರ್ತಿ ಹಾಜರು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2017, 19:30 IST
Last Updated 23 ಆಗಸ್ಟ್ 2017, 19:30 IST
ವಿಚಾರಣೆಗೆ ಕಾರ್ತಿ ಹಾಜರು
ವಿಚಾರಣೆಗೆ ಕಾರ್ತಿ ಹಾಜರು   

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಎಂಬ ಸಂಸ್ಥೆಗೆ ವಿದೇಶಿ ಬಂಡವಾಳ ಪಡೆಯಲು ನೀಡಲಾದ ಅನುಮತಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ಮಗ ಕಾರ್ತಿ ಚಿದಂಬರಂ ಅವರು ಸಿಬಿಐ ಮುಂದೆ ಬುಧವಾರ ವಿಚಾರಣೆಗೆ ಹಾಜರಾದರು.

ಸುಪ್ರೀಂ ಕೋರ್ಟ್‌ನ ಸೂಚನೆಯ ಅನುಸಾರ ಅವರು ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಕಾರ್ತಿ ವಿರುದ್ಧ ಹೊರಡಿಸಿದ್ದ ಲುಕ್‌ ಔಟ್‌ ನೋಟಿಸ್‌ಗೆ ತಡೆ ನೀಡಿದ್ದ ಮದ್ರಾಸ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT