ಲಖನೌ (ಪಿಟಿಐ):ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ಮುಂದಾಗಿರುವ ಉತ್ತರಪ್ರದೇಶ ಸರ್ಕಾರ, ಶಾಲಾ– ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಸಮರಕಲೆ ತರಬೇತಿ ನೀಡಲು ನಿರ್ಧರಿಸಿದೆ.
ಇಲ್ಲಿ ಮಂಗಳವಾರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಮಹಿಳಾ ಸಹಾಯವಾಣಿ ‘1090’ ಪರಿಶೀಲಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿನಿಯರಿಗೆ ಸಮರಕಲೆ ತರಬೇತಿ ನೀಡಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲೋಕ್ ರಂಜನ್ ಅವರಿಗೆ ಸೂಚಿಸಿದರು.
ಯಾವುದೇ ರೀತಿಯ ಕಿರುಕುಳ, ಅವಾಚ್ಯ ಶಬ್ದಗಳಿಂದ ಕರೆಯುವುದು ಹಾಗೂ ಯಾರಾದರೂ ತಮ್ಮನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿದರೆ, ಕೂಡಲೇ ಮಹಿಳೆಯರು ಸರ್ಕಾರ ಆರಂಭಿಸಿರುವ ಈ ಮಹಿಳಾ ಸಹಾಯವಾಣಿಗೆ (ಸಂಖ್ಯೆ– 1090) ಕರೆ ಮಾಡಿ ದೂರು ದಾಖಲಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.