ADVERTISEMENT

ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 19:30 IST
Last Updated 22 ಆಗಸ್ಟ್ 2017, 19:30 IST

ನವದೆಹಲಿ: ವಿಧಾನಪರಿಷತ್‌ನ ಎರಡು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಮಂಗಳವಾರ ಘೋಷಿಸಲಾಗಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಕೆ.ಕೆ. ಮಂಜುನಾಥ ಅವರನ್ನು, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಡಾ.ರಾಮೋಜಿ ಗೌಡ ಅವರನ್ನು ಪಕ್ಷದಿಂದ ಕಣಕ್ಕಿಳಿಸಲು ಎಐಸಿಸಿ ನಿರ್ಧರಿಸಿದೆ.

ಜೊತೆಗೆ ಕಾಂಗ್ರೆಸ್‌ನ ರಾಜ್ಯ ಹಿಂದುಳಿದ ವರ್ಗಗಳ ವಿಭಾಗಕ್ಕೆ ವಿಧಾನ ಪರಿಷತ್‌ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ, ಆದಿವಾಸಿ ವಿಭಾಗಕ್ಕೆ ಕೆ.ಪಿ. ಪಾಲಯ್ಯ, ಮೀನುಗಾರರ ವಿಭಾಗಕ್ಕೆ ಯು.ಕೆ. ಸಭಾಪತಿ ಅವರನ್ನು ಮುಖ್ಯಸ್ಥರನ್ನಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ನೇಮಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಪ್ರಕಟಣೆ ಮೂಲಕ
ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.