ADVERTISEMENT

ವಿಮಾನದಲ್ಲಿ ಕಾಣಿಸಿಕೊಂಡ ಇಲಿ!

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2015, 19:30 IST
Last Updated 30 ಡಿಸೆಂಬರ್ 2015, 19:30 IST

ಮುಂಬೈ (ಪಿಟಿಐ): ಮುಂಬೈ ಮಾರ್ಗವಾಗಿ ಅಹಮದಾ ಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಲಿ ಕಾಣಿಸಿಕೊಂಡು ಪ್ರಯಾಣಿಕರು ಭೀತಿಗೆ ಒಳಗಾದ ಘಟನೆ ನಡೆದಿದೆ.

ಇಲ್ಲಿನ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನದ ಕ್ಯಾಬಿನ್‌ನಲ್ಲಿ ಇಲಿ ಓಡಾಡುತ್ತಿರುವುದನ್ನು ಗಮನಿಸಿದ ಪ್ರಯಾಣಿಕರು ವಿಮಾನವನ್ನು ಮುಂಬೈ ನಿಲ್ದಾಣಕ್ಕೆ ಕೊಂಡೊ ಯ್ಯುವಂತೆ ಪೈಲಟ್‌ಗೆ ಸೂಚಿಸಿದರು.

‘ವಿಮಾನದಲ್ಲಿ ಇಲಿ ಕಾಣಿಸಿಕೊಂಡಿರುವುದು ದೃಢಪಟ್ಟಿಲ್ಲ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಮಾನವು ಮುಂಬೈ ನಿಲ್ದಾಣಕ್ಕೆ ವಾಪಸಾಯಿತು. ಘಟನೆ ಬಗ್ಗೆ ನಮ್ಮ ಎಂಜಿನಿಯರ್‌ಗಳು ತನಿಖೆ ನಡೆಸುತ್ತಿದ್ದಾರೆ’ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದರು. ಪ್ರಯಾಣಿಕರಿಗೆ ಬೇರೆ ವಿಮಾನದ ವ್ಯವಸ್ಥೆ ಮಾಡಲಾಯಿತು. 6 ಗಂಟೆ ತಡವಾಗಿ ವಿಮಾನವು ಲಂಡನ್‌ಗೆ ತೆರಳಿತು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.