ADVERTISEMENT

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಹಿಂದಿ ಭಾಷಣ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2014, 10:42 IST
Last Updated 14 ಸೆಪ್ಟೆಂಬರ್ 2014, 10:42 IST

ನವದೆಹಲಿ (ಪಿಟಿಐ): ಇದೇ ತಿಂಗಳು 27ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿಯಲ್ಲಿ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಹೇಳಿದ್ದಾರೆ.

ಈ ಹಿಂದೆ ಅಟಲ್‌ ಬಿಹಾರಿ ವಾಜಪೇಯಿ ಅವರು ಮೊದಲ ಬಾರಿ ವಿಶ್ವಸಂಸ್ಥೆ ಅಧಿವೇಶನದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದರು ಎಂದು ರಾಷ್ಟ್ರಪತಿ ಭವನದಲ್ಲಿ ನಡೆದ ‘ಹಿಂದಿ ದಿವಸ್‌’ ಕಾರ್ಯಕ್ರಮ ಆಚರಣೆಯ ಸಂದರ್ಭದಲ್ಲಿ  ರಾಜನಾಥ ಸಿಂಗ್‌ ತಿಳಿಸಿದರು.

‘ನಾನು ಸಚಿವನಾಗಿ ವಿಶ್ವಸಂಸ್ಥೆಯಲ್ಲಿ  ಒಮ್ಮೆ ಹಿಂದಿಯಲ್ಲಿ ಭಾಷಣ ಮಾಡಿದ್ದೆ’ ವಿಶ್ವಸಂಸ್ಥೆಯಲ್ಲಿ ನಮ್ಮ ಪ್ರಧಾನಿ ಮೋದಿ ಅವರು ಹಿಂದಿಯಲ್ಲಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಅವರು ವಿದೇಶಿ ಗಣ್ಯರೊಂದಿಗೆ ಕೂಡ ಹಿಂದಿಯಲ್ಲಿ ಮಾತನಾಡುತ್ತಾರೆ ಎಂದು ಗೃಹ ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT