ADVERTISEMENT

ವಿಶ್ವಸಂಸ್ಥೆ ಸಲಹಾ ಮಂಡಳಿಗೆ ಜೈರಾಂ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2014, 19:30 IST
Last Updated 14 ಡಿಸೆಂಬರ್ 2014, 19:30 IST

ನವದೆಹಲಿ (ಪಿಟಿಐ): ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್‌ ಅವರನ್ನು ಅಭಿವೃದ್ಧಿಶೀಲ ರಾಷ್ಟ್ರ­ಗಳಿಗೆ ಪರಿಸರ ಸ್ನೇಹಿ ತಂತ್ರಜ್ಞಾನದ ಬಗ್ಗೆ ಸಲಹೆ ನೀಡುವ ವಿಶ್ವಸಂಸ್ಥೆಯ ಸಲಹಾ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಅಂತರರಾಷ್ಟ್ರೀಯ ಮಟ್ಟದ ಈ ಸಲಹಾ ಮಂಡಳಿಯ ಕಚೇರಿಯು ಜಪಾನ್‌ನ ಒಸಾಕಾದಲ್ಲಿ ಇದೆ. ಈ ನೇಮಕಾತಿಯನ್ನು ತಾವು ಒಪ್ಪಿಕೊಂಡಿರುವುದಾಗಿ ರಮೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.