ಶಬರಿಮಲೆ(ಐಎಎನ್ಎಸ್): ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದ ಬಾಗಿಲನ್ನು ತೆರೆದ ಐದು ದಿನಗಳಲ್ಲಿ ಅತಿ ಹೆಚ್ಚು ಆದಾಯ ಸಂಗ್ರಹವಾಗಿದ್ದು, ಕಳೆದ ವರ್ಷದ ಈ ಅವಧಿಯಲ್ಲಿ ಸಂಗ್ರಹವಾದ ಆದಾಯದ ಶೇ 22 ರಷ್ಟು ಹೆಚ್ಚು ಆದಾಯ ಸಂಗ್ರಹವಾಗಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ತಿಂಗಳ ಅವಧಿಯ ಶಬರಿಮಲೆ ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರಿಗಾಗಿ ಕಳೆದ ಸೋಮವಾರ ದೇವಾಲಯದ ಬಾಗಿಲನ್ನು ತೆರೆಯಲಾಗಿತ್ತು. ಈ ವರ್ಷ ಐದು ದಿನಗಳಲ್ಲಿ ₨2.64 ಕೋಟಿ ಸಂಗ್ರಹವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.