ADVERTISEMENT

‘ಶಬರಿ’ ವಿಮಾನ ನಿಲ್ದಾಣಕ್ಕೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2017, 19:30 IST
Last Updated 16 ಫೆಬ್ರುವರಿ 2017, 19:30 IST
‘ಶಬರಿ’ ವಿಮಾನ ನಿಲ್ದಾಣಕ್ಕೆ  ಒಪ್ಪಿಗೆ
‘ಶಬರಿ’ ವಿಮಾನ ನಿಲ್ದಾಣಕ್ಕೆ ಒಪ್ಪಿಗೆ   

ತಿರುವನಂತಪುರ: ಪತ್ತನಂತಿಟ್ಟ ಜಿಲ್ಲೆಯ ಶಬರಿ ಮಲೆ ಬಳಿ ವಿಮಾನ ನಿಲ್ದಾಣ ಸ್ಥಾಪನೆಗೆ ಕೇರಳದ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ ಪ್ರಸ್ತಾಪಿತ ವಿಮಾನ ನಿಲ್ದಾಣಕ್ಕೆ ಸ್ಥಳ ಇನ್ನೂ ನಿಗದಿಯಾಗಿಲ್ಲ.

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ತೆರಳುವ ಯಾತ್ರಿಗಳ ಸಹಾಯಕ್ಕೆ ಅಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲು ಕಳೆದ ಹಲವು ವರ್ಷಗಳಿಂದ ಪ್ರಯತ್ನ ನಡೆಸಲಾಗಿತ್ತು.
ಕಳೆದ ನವೆಂಬರ್‌ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಅಶೋಕ್‌ ಗಜಪತಿ ರಾಜು  ಭೇಟಿಯ ನಂತರ ವಿಮಾನ ನಿಲ್ದಾಣ ಸ್ಥಾಪನೆಗೆ ಎರುಮಲೆ ಬಳಿ ಸ್ಥಳ ಗುರುತಿಸಲಾಗಿತ್ತು.

ಪ್ರತಿ ವರ್ಷ 3 ಕೋಟಿಗೂ ಅಧಿಕ ಭಕ್ತರು ಚೆಂಗನ್ನೂರ್‌ ಅಥವಾ ತಿರುವಲ್ಲಾ ರೈಲು ನಿಲ್ದಾಣದಿಂದ ಇಲ್ಲವೇ ಎನ್‌ಎಚ್‌ 47 ಮಾರ್ಗದಿಂದ ಶಬರಿಮಲೆಗೆ  ಪ್ರಯಾಣಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.