ನವದೆಹಲಿ (ಪಿಟಿಐ): ಭಾರತ ವಾರ್ತಾ ಸೇವೆಯ ಶರತ್ ಚಂದರ್ ಅವರು ಪ್ರಧಾನ ಮಂತ್ರಿ ಕಚೇರಿಯ ಮಾಹಿತಿ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಈ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದ್ದು, ಶರತ್ ಚಂದರ್ ಅವರು ಭಾರತ ವಾರ್ತಾ ಸೇವೆಯ 1999ನೇ ತಂಡದ ಅಧಿಕಾರಿಯಾಗಿದ್ದಾರೆ. ಸದ್ಯ ಅವರು ಪಿಐಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಕೂಡಲೇ ಪ್ರಧಾನಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.