ADVERTISEMENT

ಶಾರದಾ ಸಮೂಹಕ್ಕೆ ಸೇರಿದ ರೂ. 100 ಕೋಟಿ ಆಸ್ತಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2014, 19:30 IST
Last Updated 20 ಅಕ್ಟೋಬರ್ 2014, 19:30 IST

ಕೋಲ್ಕತ್ತ (ಪಿಟಿಐ): ಬಹುಕೋಟಿ ಶಾರದಾ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಶಾರದಾ ಸಮೂಹಕ್ಕೆ ಸೇರಿದ ಸುಮಾರು ರೂ. 100 ಕೋಟಿ ಮೌಲ್ಯದ ಆಸ್ತಿಗಳನ್ನು ಸೋಮವಾರ ಮುಟ್ಟುಗೋಲು ಹಾಕಿಕೊಂಡಿದೆ.

‘ದಕ್ಷಿಣ 24 ಪರಗಣ ಜಿಲ್ಲೆಯಲ್ಲಿನ ರೆಸಾರ್ಟ್‌, ಭೂಮಿ ಮತ್ತು ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಶಾರದಾ ಸಮೂಹದ ವಿವಿಧ ಆಸ್ತಿಪಾಸ್ತಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಇ.ಡಿ ಮೂಲಗಳು ತಿಳಿಸಿವೆ.

ಸಮೂಹಕ್ಕೆ ಸೇರಿದ ಇತರೆ ಆಸ್ತಿಗಳ ಶೋಧ ಕಾರ್ಯ ನಡೆಸಲಾಗುತ್ತಿದೆ. ಅವುಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ.

ಕೆಲವು ಆಸ್ತಿಗಳು ಶಾರದಾ ಸಮೂಹದ ಮುಖ್ಯಸ್ಥ ಸುದೀಪ್ತೊ ಸೆನ್‌ ಅವರ ಹೆಸರಿನಲ್ಲಿದ್ದು, ಹೆಚ್ಚಿನ ಆಸ್ತಿ ಬೇನಾಮಿ ಹೆಸರಿನಲ್ಲಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಯನ್ನು ಏನು ಮಾಡಬೇಕೆಂದು ನ್ಯಾಯಾಲಯ ಆದೇಶ ನೀಡುವವರೆಗೂ ಅದನ್ನು ಇ.ಡಿಯ ಅಧೀನದಲ್ಲಿ ಇರಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.