ADVERTISEMENT

ಶಾರುಕ್‌ ಚಾಲಕನ ಬಂಧನ

​ಪ್ರಜಾವಾಣಿ ವಾರ್ತೆ
Published 26 ಜೂನ್ 2014, 9:27 IST
Last Updated 26 ಜೂನ್ 2014, 9:27 IST

ಮುಂಬೈ (ಐಎಎನ್‌ಎಸ್‌): ಅಪ್ರಾಪ್ತ ಬಾಲಕಿ  ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟ ಶಾರುಕ್‌ ಖಾನ್‌ ಅವರ ಕಾರು ಚಾಲಕನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜೇಂದ್ರ ಕುಮಾರ್‌ ಗೌತಮ್‌ ಅಲಿಯಾಸ್‌ ಪಿಂಟೂ ಮಿಶ್ರಾ ಎಂದು ಗುರುತಿಸಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಬಾಲಕಿ ನಟಿ ಸಂಗೀತ ಬಿಜೂಲಾನಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಳೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು,  ಬಾಲಕಿಯ ಜನ್ಮ ದಿನಾಂಕವನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.