ADVERTISEMENT

ಶಾಲಾ ವಾಹನಕ್ಕೆ ರೈಲು ಡಿಕ್ಕಿ: 12 ವಿದ್ಯಾರ್ಥಿಗಳ ಸಾವು

​ಪ್ರಜಾವಾಣಿ ವಾರ್ತೆ
Published 24 ಜುಲೈ 2014, 9:20 IST
Last Updated 24 ಜುಲೈ 2014, 9:20 IST

ಹೈದರಾಬಾದ್ (ಐಎಎನ್ಎಸ್): ತೆಲಂಗಾಣದ ಮೆದಕ್ ಜಿಲ್ಲೆಯಲ್ಲಿ ಗುರುವಾರ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಮತ್ತು ರೈಲಿನ ನಡುವೆ ಸಂಭವಿಸಿದ ಅಪಘಾತದಲ್ಲಿ 12 ಶಾಲಾ ಮಕ್ಕಳು ಸೇರಿದಂತೆ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 15 ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ.

ಟೂಪ್ರನ್‌ನಲ್ಲಿರುವ ಖಾಸಗಿ ಶಾಲೆಯ ವಾಹನ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ, ಮೆದಕ್ ಜಿಲ್ಲೆಯಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ವೆಲ್‌ದುರ್ತಿ ಮಂಡಲ್‌ನ ಮೈಸಾಪೇಟೆಯಲ್ಲಿ ದುರಂತ ಸಂಭವಿಸಿದೆ.

ರೈಲ್ವೇ ಗೇಟ್‌ನಲ್ಲಿ ಬಸ್ ಚಲಿಸುತ್ತಿದ್ದಾಗ 'ನದೆಂಡ್–ಸಿಕಂದರಾಬಾದ್' ಪ್ರಯಾಣಿಕರ ರೈಲು ಡಿಕ್ಕಿಯಾಗಿದೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.