ನವದೆಹಲಿ (ಪಿಟಿಐ): ಗುತ್ತಿಗೆ ಆಧಾರದ ಮೇಲೆ ನೇಮಕವಾಗಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತಮ್ಮ ಪಕ್ಷಕ್ಕೆ ಮತ ಹಾಕದಿದ್ದರೆ ಕೆಲಸ ಕಳೆದುಕೊಳ್ಳಬೇಕಾದೀತು ಎಂಬ ಬೆದರಿಕೆ ಹಾಕಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿ, ಪ್ರಕರಣ ಮುಕ್ತಾಯ ಮಾಡಿದೆ.
ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಚುನಾವಣಾ ಆಯೋಗ ನೀಡಿದ್ದ ನೋಟಿಸ್ಗೆ ಉತ್ತರಿಸಿದ ಮುಲಾಯಂ ಅವರು, ಚುನಾವಣಾ ಪ್ರಚಾರದ ವೇಳೆ ಗುತ್ತಿಗೆ ಆಧಾರದ ಶಿಕ್ಷಕರ ವಿಚಾರವನ್ನು ಪ್ರಸ್ತಾಪಿಸುವುದಿಲ್ಲ ಎಂದು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರಿಗೆ ಇನ್ನು ಮುಂದೆ ನೀತಿ ಸಂಹಿತೆಗೆ ಧಕ್ಕೆಯಾಗುವಂತಹ ಯಾವುದೇ ಹೇಳಿಕೆಯನ್ನು ನೀಡದಂತೆ ಎಚ್ಚರಿಕೆ ನೀಡಿ, ಪ್ರಕರಣವನ್ನು ಕೊನೆಗೊಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.