ADVERTISEMENT

ಶೇ.40ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 12 ಮೇ 2014, 10:53 IST
Last Updated 12 ಮೇ 2014, 10:53 IST

ನವದೆಹಲಿ (ಪಿಟಿಐ): ಮೂರು ರಾಜ್ಯಗಳಲ್ಲಿನ 41 ಸ್ಥಾನಗಳಿಗೆ ನಡೆಯುತ್ತಿರುವ ಕೊನೆಯ ಹಂತದ ಮತದಾನ ಬಿರುಸಿನಿಂದ ಸಾಗಿದ್ದು ಮಧ್ಯಾಹ್ನದ ವರೆಗೂ ಶೇ.40ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ

ಮಧ್ಯಾಹ್ನ 1 ಗಂಟೆಯವರೆಗೂ  ಪಶ್ಚಿಮ ಬಂಗಾಳದಲ್ಲಿ ಶೇ. 56.38, ಬಿಹಾರ ಶೇ.29 ಹಾಗೂ ಉತ್ತರ ಪ್ರದೇಶದಲ್ಲಿ ಶೇ. 35 ರಷ್ಟು ಮತದಾನವಾಗಿರುವ ಬಗ್ಗೆ ವರದಿಯಾಗಿದೆ.

ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶಾಂತಿಯುತ ಮತದಾನ  ನಡೆಯುತ್ತಿದ್ದು ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.

ಬಂಗಾಳದಲ್ಲಿ ಘರ್ಷಣೆ: ಪಶ್ಚಿಮ ಬಂಗಾಳದ 7 ಲೋಕಸಭಾ ಕ್ಷೇತಗಳ ವ್ಯಾಪ್ತಿಯಲ್ಲಿ ಆಡಳಿತರೂಢ ಮತ್ತು ಸಿಪಿಐ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು ಸುಮಾರು 20ಕ್ಕೂ ಹೆಚ್ಚು ಜನರ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.