ADVERTISEMENT

ಶ್ರೀನಗರ: ಇಬ್ಬರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2015, 12:32 IST
Last Updated 27 ಜನವರಿ 2015, 12:32 IST

ಶ್ರೀನಗರ(ಪಿಟಿಐ): ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ-ಉಗ್ರರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದು, ಸೇನೆಯ ಕಮಾಂಡಿಂಗ್ ಅಧಿಕಾರಿ ಸೇರಿದಂತೆ ಮೂವರು ಭಾರತೀಯ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಜಿಲ್ಲಾ ಕೇಂದ್ರದಿಂದ 36 ಕಿ.ಮೀ. ದೂರದಲ್ಲಿರುವ ಮಿನ್ದೋರಾ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ಯೆಗೀಡಾದ ಇಬ್ಬರು ಉಗ್ರರು ಸ್ಥಳೀಯರಾಗಿದ್ದು, ಗುಂಡಿನ ಕಾಳಗದ ವೇಳೆ ಸಾವಿಗೀಡಾಗಿದ್ದಾರೆ. ಸೇನೆಯ ಕಮಾಂಡಿಂಗ್ ಅಧಿಕಾರಿ, ಪೊಲೀಸ್ ಸಿಬ್ಬಂದಿ ಸೇರಿದಂತೆ ಮೂವರು ಭಾರತೀಯ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಉಗ್ರರನ್ನು ಮಿನ್ದೋರಾ ಗ್ರಾಮದ ಆದಿಲ್ ಖಾನ್, ಸಿರಾಜ್ ಎಂದು ಗುರುತಿಸಲಾಗಿದೆ. ಇಬ್ಬರೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.