ADVERTISEMENT

ಶ್ರೀನಗರ: ಎನ್‌ಕೌಂಟರ್‌ನಲ್ಲಿ ಉಗ್ರ ಸಾವು

​ಪ್ರಜಾವಾಣಿ ವಾರ್ತೆ
Published 5 ಜುಲೈ 2014, 7:29 IST
Last Updated 5 ಜುಲೈ 2014, 7:29 IST

ಶ್ರೀನಗರ (ಪಿಟಿಐ): ದಕ್ಷಿಣ ಕಾಶ್ಮೀರ್‌ನ ಪುಲ್ವಾಮಾ ಜಿಲ್ಲೆಯ ತ್ರಾಲ್‌ ಪ್ರದೇಶದಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ  ಉಗ್ರನೊಬ್ಬ ಮೃತಪಟ್ಟಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ.

ಉಗ್ರರು ಇರುವ ಮಾಹಿತಿ ಮೇರೆಗೆ  ಅರಿಪಾಲ್ ಗ್ರಾಮದ ತ್ರಾಲ್‌  ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.

‘ಈವರೆಗೂ ನಡೆದ ಕಾಳಗದಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಒಂದು ಎಕೆ 47 ರೈಫಲ್‌ ಜತೆಗೆ ಉಗ್ರನ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ’ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.