ADVERTISEMENT

ಷಾ ಭೇಟಿ ಮುಂದಕ್ಕೆ: ಸಂಪುಟ ವಿಸ್ತರಣೆ ವದಂತಿಗೆ ಪುಷ್ಟಿ

ಪಿಟಿಐ
Published 21 ಆಗಸ್ಟ್ 2017, 19:30 IST
Last Updated 21 ಆಗಸ್ಟ್ 2017, 19:30 IST

ಚೆನ್ನೈ/ದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಅವರ ಮೂರು ದಿನಗಳ ತಮಿಳುನಾಡು ಪ್ರವಾಸವನ್ನು ಮುಂದೂಡಲಾಗಿದೆ. ಸದ್ಯದಲ್ಲೇ ಕೇಂದ್ರ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ವದಂತಿಗೆ ಇದು ಪುಷ್ಟಿ ನೀಡಿದೆ.

‘ಅವರು ಈ ಸಂದರ್ಭದಲ್ಲಿ ದೆಹಲಿಯಲ್ಲಿ ಇರಬೇಕಾದುದು ಹೆಚ್ಚು ಮುಖ್ಯವಾಗಿದೆ. ಹಾಗಾಗಿ ಪ್ರವಾಸ ಮುಂದೂಡಿಕೆಯಾಗಿದೆ’ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಿಜೆ‍ಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮತ್ತು ಇತರ ಮಹತ್ವದ ಕಾರ್ಯಕ್ರಮಗಳ ಕಾರಣದಿಂದ ಷಾ ಅವರು ಭೇಟಿಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ತಮಿಳುಸಾಯಿ ಸುಂದರ್‌ರಾಜನ್‌ ಹೇಳಿದ್ದಾರೆ.

ADVERTISEMENT

ಷಾ ಅವರ 95 ದಿನಗಳ ಭಾರತ ಪ್ರವಾಸದ ಭಾಗವಾಗಿ ತಮಿಳುನಾಡು ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. ಷಾ ಅವರ ತಮಿಳುನಾಡು ಪ್ರವಾಸ ಎರಡನೇ ಬಾರಿಗೆ ಮುಂದೂಡಿಕೆಯಾಗಿದೆ. ಭೇಟಿಯ ಮುಂದಿನ ದಿನಾಂಕವನ್ನು ಪ್ರಕಟಿಸಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.