ADVERTISEMENT

ಸಂವಿಧಾನವೇ ಏಕೈಕ ಪವಿತ್ರ ಗ್ರಂಥ : ಮೋದಿ

ಭಾರತ ಮೊದಲು ಎನ್ನುವುದು ನಮ್ಮ ಧರ್ಮ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2015, 14:33 IST
Last Updated 27 ನವೆಂಬರ್ 2015, 14:33 IST

ನವದೆಹಲಿ (ಪಿಟಿಐ):  ಅಸಹಿಷ್ಣುತೆಗೆ ಸಂಬಂಧಿಸಿದಂತೆ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತ ಮೊದಲು ಎನ್ನುವುದು ನಮ್ಮ ಧರ್ಮ, ಸಂವಿಧಾನವೇ ಏಕೈಕ ಪವಿತ್ರ ಗ್ರಂಥ’  ಎಂದು ಶುಕ್ರವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ‘ಭಾರತದ ಸಂವಿಧಾನದೆಡೆಗಿನ ಬದ್ಧತೆ’ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಚರ್ಚೆಗೆ ಉತ್ತರ ನೀಡಿದ ಅವರು,  ಜವಹರಲಾಲ್‌ ನೆಹರೂ ಸೇರಿದಂತೆ ಪ್ರಮುಖ ನಾಯಕರನ್ನು ಬಿಜೆಪಿ ಅವಗಣಿಸುತ್ತಿದೆ ಎಂಬ ಕಾಂಗ್ರೆಸ್‌ ಆರೋಪವನ್ನು ತಳ್ಳಿಹಾಕಿದರು. ದೇಶದ ಎಲ್ಲ ವರ್ಗದ ಜನತೆಯ ಅಭ್ಯುದಯಕ್ಕಾಗಿ ಶ್ರಮಿಸಲು ಬಿಜೆಪಿ ಬದ್ಧವಾಗಿದೆ ಎಂದು ಹೇಳಿದರು.

ಸುಮಾರು 70 ನಿಮಿಷಗಳ ಕಾಲ ಮಾತನಾಡಿದ ಅವರು, ಸಂವಿಧಾನವನ್ನು ಪುನರ್‌ ಪರಿಶೀಲನೆಗೊಳಪಡಿಸುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.