ADVERTISEMENT

ಸಂಸದರ ಅಪರಾಧ ಪ್ರಕರಣ ತ್ವರಿತ ವಿಚಾರಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2014, 19:30 IST
Last Updated 1 ಸೆಪ್ಟೆಂಬರ್ 2014, 19:30 IST

ನವದೆಹಲಿ (ಪಿಟಿಐ): ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿ­ನಲ್ ಪ್ರಕರಣಗಳ ವಿಚಾರಣೆಗೆ ಸುಪ್ರೀಂ­­­­ಕೋರ್ಟ್ ಗಡುವು ನಿಗದಿ­ಪಡಿ­­ಸಿ­ರುವ ಹಿನ್ನೆಲೆಯಲ್ಲಿ ಶಾಸನ ಸಭೆ­ಗಳ ಸದಸ್ಯತ್ವದಿಂದ  ಅನರ್ಹ ಗೊಳ್ಳ­­­ಬಹುದಾದಂತಹ ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ವಿಚಾ­ರಣೆ ನಡೆಸುವಂತೆ ರಾಜ್ಯ ಸರ್ಕಾರ­ಗ­ಳಿಗೆ ಸೂಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕಳಂಕಿತ ಶಾಸಕರು ಮತ್ತು ಸಂಸ­ದ­ರನ್ನು ದೂರವಿಡುವ ಮೂಲಕ ರಾಜ­ಕೀಯ ಕ್ಷೇತ್ರವನ್ನು ಶುದ್ಧ­ಗೊಳಿ­ಸ­ಬೇಕು ಎಂಬುದು ನರೇಂದ್ರ ಮೋದಿ ಅವರ ಆಶಯವೂ ಆಗಿದೆ. ಎಂದು ಕಾನೂನು ಸಚಿವ ರವಿಶಂಕರ್‌ ಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.