ADVERTISEMENT

ಸರ್ಕಾರಿ ನೌಕರರಲ್ಲಿ ದಕ್ಷತೆ ಹೆಚ್ಚಿಸಲು ಹೊಸ ಯೋಜನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2014, 19:30 IST
Last Updated 26 ಜೂನ್ 2014, 19:30 IST

ನವದೆಹಲಿ (ಪಿಟಿಐ): ಆಡಳಿತ ವ್ಯವಸ್ಥೆಯಲ್ಲಿ ಪರಿಣಾಮಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ  ನೌಕರರ ನೈತಿಕ ಸ್ಥೈರ್ಯ ಹೆಚ್ಚಿಸಲು ಸರ್ಕಾರ ಮುಂದಾಗಿದೆ.

ಮಾನವ ಸಂಪನ್ಮೂಲ ಸದ್ಬಳಕೆ ಹಾಗೂ ನೌಕರರ ದಕ್ಷತೆ ಮತ್ತು ಕರ್ತವ್ಯ ನಿಷ್ಠೆ ಹೆಚ್ಚಿಸಲು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ. 

ದಕ್ಷ ಹಾಗೂ ಪ್ರಾಮಾಣಿಕ ಸಿಬ್ಬಂದಿ ಗುರುತಿಸಿ ಉತ್ತೇಜನ ನೀಡುವಂತೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ವಿಭಾಗ ಎಲ್ಲ ಸರ್ಕಾರಿ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.