ADVERTISEMENT

ಸಲ್ಮಾನ್‌ ಪ್ರಕರಣ: ಅಪಘಾತ ಮಾಡಿದ್ದು ತಾನೆಂದ ಚಾಲಕ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2015, 9:34 IST
Last Updated 30 ಮಾರ್ಚ್ 2015, 9:34 IST

ಮುಂಬೈ: ನಟ ಸಲ್ಮಾನ್‌ ಖಾನ್‌ ವಿರುದ್ಧದ ಅಪಘಾತ ಎಸಗಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನ್ಯಾಯಾಲಯಕ್ಕೆ ಹಾಜರಾದ ಸಲ್ಮಾನ್‌ ಅವರ ಕಾರು ಚಾಲಕ, ಅಪಘಾತ ಸಂಭವಿಸಿದಾಗ ತಾನು ಕಾರು ಚಾಲನೆ ಮಾಡುತ್ತಿದ್ದುದಾಗಿ ಹೇಳಿಕೆ ನೀಡಿದ್ದಾರೆ.

2002ರ ಸೆಪ್ಟೆಂಬರ್‌ 28ರ ರಾತ್ರಿ ಮುಂಬೈನ ಬಾಂದ್ರಾದಲ್ಲಿ ನಡೆದ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT