ADVERTISEMENT

ಸಾರ್ಕ್ ಸಭೆ: ಭಾಗವಹಿಸದಿರಲು ಭಾರತ ನಿರ್ಧಾರ

ಪಿಟಿಐ
Published 27 ಸೆಪ್ಟೆಂಬರ್ 2016, 19:30 IST
Last Updated 27 ಸೆಪ್ಟೆಂಬರ್ 2016, 19:30 IST

ನವದೆಹಲಿ: ಇಸ್ಲಾಮಾಬಾದ್‌ ನಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಸಾರ್ಕ್‌ ಶೃಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿ ಸುವುದಿಲ್ಲ. ಉರಿ ಸೇನಾ ಶಿಬಿರದ ಮೇಲೆ ಪಾಕಿಸ್ತಾನ ಉಗ್ರರಿಂದ ನಡೆದ ದಾಳಿಯ ನಂತರ ಎರಡೂ ದೇಶಗಳ ನಡುವೆ ಸಂಬಂಧ ಹದಗೆಟ್ಟಿರುವುದೇ ಈ ನಿರ್ಧಾರಕ್ಕೆ ಕಾರಣ.

ಈ ಪ್ರದೇಶದಲ್ಲಿ ನಡೆಯುತ್ತಿರುವ ಗಡಿಯಾಚಿನ ಭಯೋತ್ಪಾದನಾ ದಾಳಿ ಮತ್ತು ಸದಸ್ಯ ರಾಷ್ಟ್ರಗಳ ಆಂತರಿಕ ವ್ಯವಹಾರಗಳಲ್ಲಿ ದೇಶವೊಂದರ ಮಧ್ಯಪ್ರವೇಶ ಹೆಚ್ಚುತ್ತಿದೆ. ಇದು ಶೃಂಗ ಸಭೆಯನ್ನು ಯಶಸ್ವಿಯಾಗಿ ನಡೆಸುವು ದಕ್ಕೆ ಪೂರಕವಲ್ಲದ ವಾತಾವರಣವನ್ನು ಸೃಷ್ಟಿಸಿದೆ ಎಂದು ಸಾರ್ಕ್ ಗುಂಪಿನ ಅಧ್ಯಕ್ಷತೆ ವಹಿಸಿರುವ ನೇಪಾಳಕ್ಕೆ ಭಾರತ ತಿಳಿಸಿದೆ.

ಈಗಿನ ಪರಿಸ್ಥಿತಿಯಲ್ಲಿ ಇಸ್ಲಾಮಾಬಾ ದ್‌ನಲ್ಲಿ ನಡೆಯಲಿರುವ ಶೃಂಗ ಸಭೆಯಲ್ಲಿ ಭಾರತ ಭಾಗವಹಿಸುವುದು ಸಾಧ್ಯವಿಲ್ಲ. ಇತರ ಕೆಲವು ಸದಸ್ಯ ರಾಷ್ಟ್ರಗಳೂ ಶೃಂಗ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿರುವುದು ಗಮನಕ್ಕೆ ಬಂದಿದೆ ಎಂದು ಭಾರತ ಹೇಳಿದೆ.

ಆಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಭೂತಾನ್‌ ಶೃಂಗ ಸಭೆಯಲ್ಲಿ ಭಾಗವಹಿಸ ದಿರಲು ನಿರ್ಧರಿಸಿರುವ ಇತರ ದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.