ADVERTISEMENT

ಸಿಆರ್‌ಪಿಎಫ್‌ ಮುಖ್ಯಸ್ಥರಾಗಿ ಪ್ರಕಾಶ್‌ ಪದಗ್ರಹಣ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2014, 11:28 IST
Last Updated 22 ಡಿಸೆಂಬರ್ 2014, 11:28 IST

ನವದೆಹಲಿ (ಪಿಟಿಐ): ದೇಶದಲ್ಲಿ ನಕ್ಸಲ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿರುವ ಅರೆಸೇನಾ ಪಡೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಪ್ರಕಾಶ್‌ ಮಿಶ್ರಾ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ನವದೆಹಲಿಯಲ್ಲಿರುವ ಸಿಆರ್‌ಪಿಎಫ್‌ ಕೇಂದ್ರ ಕಚೇರಿಯಲ್ಲಿ ಮಿಶ್ರಾ ಅವರು ಅಧಿಕಾರ ವಹಿಸಿಕೊಂಡರು. ಮಿಶ್ರಾ ಅವರು ಈ ಮೊದಲು ಕೇಂದ್ರ ಗೃಹ ಸಚಿವಾಲಯದಲ್ಲಿ ಆಂತರಿಕ ಭದ್ರತೆಯ ವಿಶೇಷ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ನವೆಂಬರ್‌ 30ರಂದು ದಿಲೀಪ್‌ ತ್ರಿವೇದಿ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನದಲ್ಲಿ ಮಿಶ್ರಾ ಅವರನ್ನು ನೇಮಿಸಿ ಕೇಂದ್ರ ಸರ್ಕಾರವು ಕಳೆದ ವಾರವಷ್ಟೇ ಆದೇಶಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.