ADVERTISEMENT

ಸುಳ್ಳು ಪ್ರಮಾಣ ಪತ್ರ: ಕೋರ್ಟಿಗೆಳೆಯಲು ಜನರಿಗೇ ಅವಕಾಶ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2014, 13:34 IST
Last Updated 28 ಏಪ್ರಿಲ್ 2014, 13:34 IST

ನವದೆಹಲಿ (ಪಿಟಿಐ) : ಚುನಾವಣಾ ನಾಮಪತ್ರ ಸಲ್ಲಿಸುವಾಗ ಸುಳ್ಳು ಪ್ರಮಾಣ ಪತ್ರ ನೀಡುವ ಅಭ್ಯರ್ಥಿಗಳ ವಿರುದ್ಧ ನೇರವಾಗಿ ನ್ಯಾಯಾಲಯಕ್ಕೆ ದೂರು ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ. ಅಭ್ಯರ್ಥಿಗಳು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಯೋಗ ಈ ನಿರ್ಧಾರ ಪ್ರಕಟಿಸಿದೆ.

ಇಲ್ಲಿಯವರೆಗೂ ಅಭ್ಯರ್ಥಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ದೋಷಗಳಿವೆ ಎಂದಾದರೆ ಚುನಾವಣಾ ಅಧಿಕಾರಿಗೆ ಮೊದಲು ದೂರು ನೀಡಬೇಕಿತ್ತು. ಆಗ ಅಭ್ಯರ್ಥಿಯ ಸುಳ್ಳು ಪ್ರಮಾಣ ಪತ್ರ ನೀಡಿದ್ದಾನೆ ಎಂದು ಮೇಲ್ನೋಟಕ್ಕೆ ಕಂಡುಬಂದಲ್ಲಿ ಚುನಾವಣಾ ಅಧಿಕಾರಿ ಆತನ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಬಹುದು.

ಆದರೆ ಇದೀಗ ಅಭ್ಯರ್ಥಿಯ ಪ್ರಮಾಣ ಪತ್ರದಲ್ಲಿನ ದೋಷದ ಬಗ್ಗೆ ಜನರೇ ನೇರವಾಗಿ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಆಯೋಗ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT