ADVERTISEMENT

ಸೇನಾಮುಖ್ಯಸ್ಥರ ನೇಮಕ: ತಡೆಯಾಜ್ಞೆಗೆ ನಕಾರ

​ಪ್ರಜಾವಾಣಿ ವಾರ್ತೆ
Published 7 ಜುಲೈ 2014, 19:30 IST
Last Updated 7 ಜುಲೈ 2014, 19:30 IST

ನವದೆಹಲಿ (ಪಿಟಿಐ): ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ದಲ್ಬೀರ್‌ ಸಿಂಗ್‌ ಸುಹಾಗ್‌ ಅವರ ನೇಮಕಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸುಹಾಗ್‌ ಅವರ ನೇಮಕವನ್ನು ಪ್ರಶ್ನಿಸಿ ಲೆಫ್ಟಿನೆಂಟ್‌ ಜನರಲ್‌ ರವಿ ದಸ್ತಾನೆ ಅರ್ಜಿ ಸಲ್ಲಿಸಿದ್ದರು.

‘ನೇಮಕಕ್ಕೆ ತಡೆಯಾಜ್ಞೆ ನೀಡಲು ಯಾವುದೇ ಸಕಾರಣಗಳಿಲ್ಲ’ ಎಂದು  ನ್ಯಾಯಮೂರ್ತಿ ಟಿ.ಎಸ್‌. ಠಾಕೂರ್‌ ಅವರ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸುಹಾಗ್‌ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡುವಲ್ಲಿ ವೈಯಕ್ತಿಕ ಹಿತಾಸಕ್ತಿಗಳು ಕೆಲಸ ಮಾಡಿವೆ ಎಂದು ದಸ್ತಾನೆ ಅವರು ಆರೋಪಿಸಿ­ದ್ದರು. ಸುಹಾಗ್‌ ಅವರು ಹುದ್ದೆಗೇರಲು ಸೇವಾ ಹಿರಿತನ ಹಾಗೂ ಎಲ್ಲಾ ಅಗತ್ಯ ಅರ್ಹತೆಗಳನ್ನೂ ಹೊಂದಿದ್ದಾರೆ ಎಂದು ಕೇಂದ್ರ ಸಮರ್ಥಿಸಿಕೊಂಡಿದೆ.

ಸುಪ್ರೀಂ ಕೋರ್ಟ್‌ಗೆ ಹೊಸ ನ್ಯಾಯಮೂರ್ತಿಗಳು
ನವದೆಹಲಿ (ಐಎಎನ್‌ಎಸ್‌):
ನ್ಯಾಯಮೂರ್ತಿ ಅರುಣ್‌ ಮಿಶ್ರಾ, ಆದರ್ಶ ಕುಮಾರ್‌ ಗೋಯೆಲ್‌ ಮತ್ತು ಹಿರಿಯ ನ್ಯಾಯವಾದಿ ರೋಹಿಂಟನ್‌ ನಾರಿಮನ್‌ ಅವರು ಸುಪ್ರೀಂ ಕೋರ್ಟ್‌ನ ನೂತನ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿ ಆರ್‌.ಎಂ. ಲೋಧಾ ಅವರು ಹೊಸ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.