ADVERTISEMENT

ಸ್ಮೃತಿ ಪದವಿ ವಿವಾದ ಇನ್ನೂ ಪತ್ತೆಯಾಗದ ದಾಖಲೆ

​ಪ್ರಜಾವಾಣಿ ವಾರ್ತೆ
Published 3 ಮೇ 2016, 19:30 IST
Last Updated 3 ಮೇ 2016, 19:30 IST

ನವದೆಹಲಿ (ಪಿಟಿಐ): ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರ ಬಿ.ಎ. ಪದವಿಗೆ ಸಂಬಂಧಿಸಿದ ದಾಖಲೆಗಳು ಇನ್ನೂ ಪತ್ತೆಯಾಗಿಲ್ಲ ಎಂದು ದೆಹಲಿ ವಿಶ್ವವಿದ್ಯಾಲಯ ನ್ಯಾಯಾಲಯಕ್ಕೆ ತಿಳಿಸಿದೆ.

2004ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ 1996ರಲ್ಲಿ ಬಿ.ಎ. ಪದವಿ ಪಡೆದಿರುವುದಾಗಿ ಇರಾನಿ ಅವರು ಪ್ರಮಾಣ ಪತ್ರ ಸಲ್ಲಿಸಿದ್ದರು.

ಆದರೆ, ಈ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಹವ್ಯಾಸಿ ಬರಹಗಾರ ಅಹ್ಮೆರ್‌ ಖಾನ್‌ ಅವರು ದೂರು ಸಲ್ಲಿಸಿದ್ದರು. ಹೀಗಾಗಿ ದಾಖಲೆಗಳನ್ನು ಸಲ್ಲಿಸುವಂತೆ ದೆಹಲಿ ವಿಶ್ವವಿದ್ಯಾಲಯದ ಸ್ಕೂಲ್‌ ಆಫ್‌ ಒಪನ್‌ ಲರ್ನಿಂಗ್‌ಗೆ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಹರ್ವಿಂದರ್‌ ಸಿಂಗ್‌ ಅವರು ಸೂಚಿಸಿದ್ದರು.

ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ  ಸಹಾಯಕ ಕುಲಸಚಿವ ಒ.ಪಿ. ತನ್ವೀರ್‌, ‘ಇರಾನಿ ಅವರ ಬಿ.ಎ. ಪದವಿಗೆ ಸಂಬಂಧಿಸಿದ 1996ರ ದಾಖಲೆಗಳು ಇನ್ನೂ ಪತ್ತೆಯಾಗಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.